Kannada NewsKarnataka NewsLatestPolitics

*ನಾಯಕತ್ವ ಬದಲವಣೆ ಚರ್ಚೆ: ಮಹತ್ವದ ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಕುರಿತ ವಿಚಾರ ಭಾರಿ ಚರ್ಚೆಯಾಗುತ್ತಿದ್ದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಅಂತಹ ಯಾವುದೇ ಸಂದರ್ಭ ಸದ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ನಾಯಕತ್ವ ಬದಲಾವಣೆ ಕುರುತ ಚರ್ಚೆ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

Home add -Advt

ನಾಯಕತ್ವ ಬದಲಾವಣೆ ಗೊಂದಲ ಶೀಘ್ರ ಬಗೆಹರಿಯಲಿದೆ. ಅಂತಹ ವಿಚಾರ ಬಂದಾಗ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ನಾವೆಲ್ಲ ನಾಯಕರು ಸೇರಿ ಚರ್ಚೆ ಮಾಡುತ್ತೇವೆ. ಆದರೆ ಈಗ ಅಂತಹ ಯಾವುದೇ ಸಂದರ್ಭ ಇಲ್ಲ. ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಇದ್ದಾರೆ. ಹಾಗಾಗಿ ಈ ವಿಚಾರ ಬರುದಿಲ್ಲ ಎಂದು ತಿಳಿಸಿದರು.


Related Articles

Back to top button