ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಲ್ಲಿಕಾರ್ಜುನ ಖೂಬಾರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟಿಸಲಾಗಿದೆ.
ಬಸವಕಲ್ಯಾಣ ವಿಧಾನಸಭಾ ಉಪಚುನಾವಣೆಯಲ್ಲಿ ಖೂಬಾ ಬಿಜೆಪಿಯಿಂದ ಟಿಕೆಟ್ ಬಯಸಿದ್ದರು. ಆದರೆ ಬಿಜೆಪಿ ಶರಣು ಸಾಲಗರ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿತ್ತು. ಇದರಿಂದ ಬೇಸತ್ತ ಖೂಬಾ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.
ಇದೀಗ ಪಕ್ಷದ ಶಿಸ್ತು ಉಲ್ಲಂಘನೆ ಆರೋಪದಡಿ ಮಲ್ಲಿಕಾರ್ಜುನ ಖೂಬಾರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟಿಸಿ ಆದೇಶ ಹೊರಡಿಸಲಾಗಿದೆ.
ಲಾಲೂ ಪ್ರಸಾದ್ ಯಾದವ್ ಗೆ ಜಾಮೀನು ಮಂಜೂರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ