
ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ತೋರಿದ್ದ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾಗೆ ಯಾದಗಿರಿ ಪೊಕ್ಸೋ ಕೋರ್ಟ್ ಕೋರ್ಟ್ ಬಿಗ್ ಶಾಕ್ ನೀಡಿದೆ.
ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುಅನ್ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಪ್ರಕರಣದಿಂದ ಬಂಧನ ಭೀತಿಯಲ್ಲಿದ್ದ ಮುತ್ಯಾ, ನಿರೀಕ್ಷಣ ಅಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ, ವಿಶೇಷ ಪೋಕ್ಸೋ ನ್ಯಾಯಾಲಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ನ್ಯಾಯಾಧೀಶರಾದ ಮರುಳುಸಿದ್ದರಾಧ್ಯ ಅವರು ಮುತ್ಯಾ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಇದರಿಂದಾಗಿ ಮಲ್ಲಿಕಾರ್ಜುನ ಮುತ್ಯಾಗೆ ಬಂಧನ ಭೀತಿ ಇನ್ನಷ್ಟು ಹೆಚ್ಚಿದೆ.




