
ಪ್ರಗತಿವಾಹಿನಿ ಸುದ್ದಿ: ಮಾಲೂರು ವಿಧಾನಸಭಾ ಕ್ಷೇತ್ರಕ್ಕೆ ಮರು ಮತ ಎಣಿಕೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿ ಹೈಕೋರ್ಟ್ ನಲ್ಲಿ ಮಂಜುನಾಥ್ ಗೌಡ ಎಂಬುವವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮಾಲೂರು ಶಾಸಕ ನಂಜೇಗೌಡ ಅವರ ಶಾಸಕತ್ವ ಅಸಿಂಧುಗೊಳಿಸಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ನಂಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದ್ದು, ಮಾಲೂರು ಕ್ಷೇತ್ರಕ್ಕೆ ಮರು ಮತ ಎಣಿಕೆ ನಡೆಸುವಂತೆ ರಾಜ್ಯ ಚುನಾವಣಾಧಿಕಾರಿಗೆ ಸೂಚನೆ ನೀಡಿದೆ
ನಾಲ್ಕು ವಾರಗಳಲ್ಲಿ ಮಾಲೂರು ಕ್ಷೇತ್ರದ ಮರು ಮತ ಎಣಿಕೆ ನಡೆಸಿ, ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಲಾಗಿದೆ.