Karnataka NewsLatestPolitics

*ಮಾಲೂರು ಕ್ಷೇತ್ರದಲ್ಲಿ ಮರುಮತ ಎಣಿಕೆ ಆರಂಭ*

ಪ್ರಗತಿವಾಹಿನಿ ಸುದ್ದಿ: ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ಕಾರ್ಯ ಆರಂಭಗೊಂಡಿದೆ.

ನಗರದ ತೋಟಗಾರಿಕಾ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಮತ ಎಣಿಕೆ ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆ ಫಲಿತಾಂಶ ಹೊರಬೀಳಲಿದೆ. ಮತ ಎಣಿಕೆ ಕೇಂದ್ರದ ಸುತ್ತ ಸಿಸಿಟಿವಿ ಕಣ್ಗಾವಲು ಹಾಕಲಾಗಿದೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ಮತ ಎಣಿಕೆ ನಡೆಯುತ್ತಿದೆ.

ಮತ ಎಣಿಕೆ ಕೇಂದ್ರದ ಒಳಗೆ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ನಿಷೇಧಿಸಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಕೆ.ವೈ.ನಂಜೇಗೌಡ 248 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಮತ ಎಣಿಕೆಯಲ್ಲಿ ದೋಷವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಮಂಜುನಾಥ ಗೌಡ ಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮರು ಮತ ಎಣಿಕೆ ನಡೆಯುತ್ತಿದೆ.

Home add -Advt

Related Articles

Back to top button