
ಪ್ರಗತಿವಾಹಿನಿ ಸುದ್ದಿ; ಕೋಲ್ಕತಾ: ಮೇ 26ವರೆಗೂ ರಾಜ್ಯಕ್ಕೆ ಶ್ರಮಿಕ್ ರೈಲುಗಳನ್ನು ಕಳುಹಿಸದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರೈಲ್ವೆ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ.
ಈ ಸಂಬಂಧ ಮುಖ್ಯ ಕಾರ್ಯದರ್ಶಿ ರಾಜೀವ್ ಸಿನ್ಹಾ ರೈಲ್ವೆ ಸಚಿವಾಲಯಕ್ಕೆ ಪತ್ರ ಬರೆದಿರುವ ವರು, ಪಶ್ಚಿಮ ಬಂಗಾಳ ಈಗಾಗಲೇ ಅಂಫಾನ್ ಚಂಡಮಾರುತದಿಂದ ತತ್ತರಿಸಿದ್ದು, ಅಪಾರ ಪ್ರಮಾಣದ ಹಾನಿ ಅನುಭವಿಸುತ್ತಿದೆ. ಜಿಲ್ಲಾಡಳಿತ ಪರಿಹಾರ ಮತ್ತು ಪುನರ್ವಸತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು ಶ್ರಮಿಕ್ ರೈಲು ಕಾರ್ಯಾಚರಣೆಗಳ ಬಗ್ಗೆ ಗಮನ ಹರಿಸಲು ಸಾಧ್ಯವಾಗುವುದಿಲ್ಲ. ಈ ನಿಟ್ಟಿನಲ್ಲಿ ಮೇ 26ರವರೆಗೆ ಪಶ್ಚಿಮ ಬಂಗಾಳಕ್ಕೆ ಯಾವುದೇ ರೈಲುಗಳನ್ನು ಕಳುಹಿಸದಂತೆ ಮನವಿ ಮಾಡಿದ್ದಾರೆ.
ಅಂಫಾನ್ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳದಲ್ಲಿ 86 ಜನರು ಸಾವನ್ನಪ್ಪಿದ್ದಾರೆ. ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ