ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬರ್ಧಮಾನ್ನ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತಿ ಸೀಟ್ನಲ್ಲಿ ಕುಳಿತುಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ.
ತಕ್ಷಣ ಅವರ ಬಳಿಗೆ ರಕ್ಷಣಾ ಸಿಬ್ಬಂದಿಗಳು ಧಾವಿಸಿದ್ದಾರೆ. ಇದೀಗಾ ಸಿಎಂ ಮಮತಾ ಬ್ಯಾನರ್ಜಿ ಅವರು ಅಸನ್ಸೋಲ್ಗೆ ಪ್ರಯಾಣ ಬೆಳೆಸಿದ್ದಾರೆ. ಈ ಬಗ್ಗೆ ವಿಡಿಯೋವೊಂದನ್ನು ಎಎನ್ಐ ಎಕ್ಸ್ನಲ್ಲಿ ಹಂಚಿಕೊಳ್ಳಲಾಗಿದೆ.
ಹೆಲಿಕಾಪ್ಟರ್ನ ಮುಂದೆ ಇರಿಸಲಾದ ಚಲಿಸಬಲ್ಲ ಮೆಟ್ಟಿಲುಗಳ ಮೇಲೆ ಕಾಲಿಟ್ಟು, ಒಳಗೆ ಹೋಗಿದ್ದಾರೆ, ಆಸನದಲ್ಲಿ ಕುಳಿತುಕೊಳ್ಳಬೇಕು ಎನ್ನಷ್ಟರಲ್ಲಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಈ ಘಟನೆಯಿಂದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ಹೇಳಲಾಗಿದೆ. ತಕ್ಷಣ ಭದ್ರತಾ ಸಿಬ್ಬಂದಿ ಬಂದು ಅವರನ್ನು ಮೇಲಕ್ಕೆ ಎತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ