Belagavi NewsBelgaum NewsCrimeKannada NewsKarnataka NewsNationalPolitics

*ಮಚ್ಚು ಹಿಡಿದು ಸಾರ್ವಜನಿಕರಿಗೆ ಭಯ ಹುಟ್ಟಿಸಿದ ವ್ಯಕ್ತಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ಮುತಗಾ ಗ್ರಾಮದಲ್ಲಿ ಮಾರಕಾಸ್ತ್ರದೊಂದಿಗೆ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮುತಗಾ ಗ್ರಾಮದಲ್ಲಿ ‘ಗ್ರಿಲ್ & ಚಿಲ್’ ಹೊಟೇಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬ ಮಾರಕಾಸ್ತ್ರ ಹಿಡಿದುಕೊಂಡು ಗಲಾಟೆ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಮಾರಿಹಾಳ ಪೋಲೀಸ್ ಠಾಣೆಯ ಪಿಎಸ್‌ಐ ಚಂದ್ರಶೇಖರ ಸಿ. ಹಾಗೂ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ, ಸಾಗರ ತರುಣ ಮಂಡಲ (40) ಎಂಬಾಯ ಕಬ್ಬಿಣದ ಕೊಯ್ತಾ(ಮಚ್ಚು) ಹಿಡಿದುಕೊಂಡು ಸಾರ್ವಜನಿಕರಿಗೆ ಭಯ ಉಂಟು ಮಾಡುತ್ತಿರುವುದು ಕಂಡು ಬಂದಿದ್ದರಿಂದ, ಕೂಡಲೇ ಆತನಿಗೆ ವಶಕ್ಕೆ ಪಡೆಯಲಾಗಿದೆ.

Home add -Advt

ಮಾರಿಹಾಳ ಪಿಎಸ್‌ಐ ಹಾಗೂ ಸಿಬ್ಬಂದಿಯವರು ಆತನಿಗೆ ವಶಕ್ಕೆ ಪಡೆದು ಆತನ ಬಳಿ ಇದ್ದ ಮಾರಕಾಸ್ತ್ರವನ್ನು ಜಪ್ತಿಪಡಿಸಿಕೊಂಡು, ಆರೋಪಿಯ ವಿರುದ್ಧ ಮಾರಿಹಾಳ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ. 53/2026 ಕಲಂ. 27(1) ಇಂಡಿಯನ್ ಆರ್ಮ ಆ್ಯಕ್ಷ ಮತ್ತು ಕಲಂ. 97 ಕೆ.ಪಿ ಆ್ಯಕ್ಷ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿರುತ್ತಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರಿಹಾಳ ಪೊಲೀಸ್ ಠಾಣೆಯ ಪಿಎಸ್‌ಐ ಚಂದ್ರಶೇಖರ ಸಿ. ಹಾಗೂ ಸಿಬ್ಬಂದಿಯವರ ಕಾರ್ಯವನ್ನು ಪೊಲೀಸ್ ಆಯುಕ್ತರು, ಬೆಳಗಾವಿ ನಗರ ಹಾಗೂ ಡಿಸಿಪಿಗಳು ಶ್ಲಾಘಿಸಿದ್ದಾರೆ.

Related Articles

Back to top button