
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕಣಬರ್ಗಿಯ ಸೆಂಚೂರಿಯನ್ ಕ್ಲಬ್ ಬಳಿ ಮಟ್ಕಾ ಸಂಖ್ಯೆ ಬರೆಯುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ನಾಗರಾಜ ಯಲ್ಲಪ್ಪಾ ತಲ್ಲೂರ ಎಂದು ಗುರುತಿಸಲಾಗಿದೆ. ಈತ ಸಾರ್ವಜನಿಕ ರಸ್ತೆಯ ಪಕ್ಕದಲ್ಲಿ ಮಟ್ಕಾ ಅಂಕಿ ಸಂಖ್ಯೆಗಳ ಮೇಲೆ ಸಾರ್ವಜನಿಕರಿಂದ ಹಣ ವಸೂಲಿ ಮಾಡಿ ಓ.ಸಿ ಜುಗಾರ್ ಆಟದಲ್ಲಿ ತೋಡಗಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಾಳಮಾರುತಿ ಪೊಲೀಸ್ ಠಾಣೆ ಪಿಎಸ್ಐ ಹೊನ್ನಪ್ಪ ತಳವಾರ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಒಟ್ಟು ರೂ. 1,100 ರೂ. ನಗದು ಹಣ, ಬಾಲ್ಪೆನ್, ಓ.ಸಿ ಸಂಖ್ಯೆ ಚೀಟಿಗಳನ್ನು ಜಪ್ತಿ ಮಾಡಲಾಗಿದೆ.
ಆರೋಪಿತನ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ. 132/2025, ಕಲಂಃ 78(3) ಕೆ.ಪಿ. ಆ್ಯಕ್ಷ, 1963ರ ಪ್ರಕಾರ ಪ್ರಕರಣ ದಾಖಲಾಗಿಸಿಕೊಂಡು ಕಾನೂನು ಕ್ರಮ ಜರುಗಿಸಲಾಗಿದೆ.