Kannada NewsKarnataka News

*ಆಸ್ಪತ್ರೆ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಆಸ್ಪತ್ರೆ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಜಿಗಣಿ ನಿವಾಸಿ ಮುನಿಯಲ್ಲಪ್ಪ(46) ಎಂದು ಗುರುತಿಸಲಾಗಿದೆ. ವ್ಯಕ್ತಿ ಕಳೆದ 16ನೇ ತಾರೀಖಿನಂದು ಆಸ್ಪತ್ರೆಗೆ ಬಂದಿದ್ದರು. ಅಸ್ತಮಾ, ಹೊಟ್ಟೆನೋವು, ಜ್ವರ ಎಂದು ಅಡ್ಮಿಟ್ ಆಗಿದ್ದರು. ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮುನಿಯಲ್ಲಪ್ಪ ಅಡ್ಮಿಟ್ ಆದ ಒಂದೇ ದಿನಕ್ಕೆ ಡಿಸ್ಟಾರ್ಜ್ ಆಗಿದ್ದರು.

ಇದಾದ ಬಳಿಕ ಇಂದು ಮತ್ತೆ ಮುನಿಯಲ್ಲಪ್ಪ ಆಸ್ಪತ್ರೆಗೆ ಬಂದಿದ್ದರು. ಆಸ್ಪತ್ರೆಯ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮೃತದೇಹ ಆಸ್ಪತ್ರೆ ಬಿಲ್ಡಿಂಗ್‌ನ ಸಜ್ಜದ ಮೇಲೆ ಬಿದ್ದಿತ್ತು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.‌ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button