Belagavi NewsBelgaum NewsKannada NewsKarnataka NewsLife StylePolitics
*ರೈಲಿನಡಿ ಸಿಲುಕಿ ವ್ಯಕ್ತಿ ಸಾವು: ಆತ್ಮಹತ್ಯೆಯ ಶಂಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಮಜಗಾವಿ ಬಳಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿಜಯಪುರ ಮೂಲದ ವ್ಯಕ್ತಿ ರೈಲಿನಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆಯು ನಿನ್ನೆ ರಾತ್ರಿ ನಡೆದಿದೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಗಣಸಿದ್ದ ನಂದೊಗೋಳ ಎಂದು ತಿಳಿದು ಬಂದಿದೆ. ಈ ವ್ಯಕ್ತಿಯು ಮಜಗಾವಿಯಲ್ಲಿ ಕುಟುಂಬ ಸಮೇತ ವಾಸವಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮಜಗಾವಿಯ ರೈಲ್ವೆ ಟ್ರ್ಯಾಕ್ ಬಳಿ ಈ ಘಟನೆ ನಡೆದಿದೆ. ಇನ್ನೂ ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದೆ.