ಪ್ರಗತಿವಾಹಿನಿ ಸುದ್ದಿ; ಮುಂಬೈ: ಅಪ್ರಾಪ್ತ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ಪಾಪಿ ತಂದೆಗೆ ಮುಂಬೈ ನ್ಯಾಯಾಲಯ 25 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
ವಿಶೇಷ ನ್ಯಾಯಾಲಯದ ನ್ಯಾ.ಭಾರ್ತಿ ಕಾಳೆ ಕಳೆದ ವಾರ ಆರೋಪಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ-ಪೊಕ್ಸೊ ಕಾಯ್ದೆಯಡಿ ತಪ್ಪಿತಸ್ಥ ಎಂದು ಘೋಷಿಸಿದ್ದರು. ಇಂದು ಶಿಕ್ಷೆ ಪ್ರಮಾಣ ಪ್ರಕಟಿಸಿರುವ ನ್ಯಾಯಾಧೀಶರು ಅಪರಾಧಿಗೆ 25 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ.
ಕೌಟುಂಬಿಕ ಕಲಹದಿಂದಾಗಿ 7 ವರ್ಷಗಳ ಹಿಂದೆ ಸಂತ್ರಸ್ತೆಯ ತಾಯಿ ತನ್ನ ಪತಿಯಿಂದ ದೂರವಾಗಿದ್ದಳು. ಪಾಪಿ ತಂದೆ ಮಗಳ ಮೇಲೆಯೇ ನಿರಂತರ ಅತ್ಯಾಚಾರವೆಸಗಿದ್ದ. ಸಂತ್ರಸ್ತೆಯ ಅಜ್ಜಿ ಈ ಬಗ್ಗೆ ದೂರು ದಾಖಲಿಸಿದ್ದರು. ತನ್ನ ಮೊಮ್ಮಗಳಿಗೆ ನ್ಯಾಯ ಕೊಡಿಸಲು ಕಾನೂನು ಹೋರಾಟ ನಡೆಸಿದ್ದ ಅಜ್ಜಿಯನ್ನು ನ್ಯಾಯಾಲಯ ಶ್ಲಾಘಿಸಿದೆ.
ತಂದೆಯಾದವನು ತನ್ನ ಮಗಳ ನಂಬಿಕೆ, ಪ್ರೀತಿ, ಭದ್ರತೆಗಾಗಿ ಅಡಿಪಾಯ ಹಾಕುತ್ತಾನೆ. ಮಗಳಿಗಾಗಿ ಎಲ್ಲಾ ತ್ಯಾಗಕ್ಕೂ ಸಿದ್ಧನಾಗುತ್ತಾನೆ. ಆಕೆಯ ಜೀವನವನ್ನು ಸುರಕ್ಷಿತಗೊಳಿಸಲು, ಆಕೆಯನ್ನು ಸಂತೋಷದಿಂದ ಇರುವಂತೆ ನೋಡಿಕೊಳ್ಳುತ್ತಾನೆ. ಆದರೆ ಈ ಪ್ರಕರಣದಲ್ಲಿ ತಂದೆಯೇ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಮೇಲೆ ಬಾಲ್ಯದಲ್ಲಿ ಆದ ಆಘಾತ ಅವಳ ಮೇಲೆ ಪರಿಣಾಮವನ್ನು ಬೀರುತ್ತದೆ ಎಂದು ನ್ಯಾಯಾಲಯ ಕಳವಳ ವ್ಯಕ್ತಪಡಿಸಿದೆ.
ಕಾರು ಅಪಘಾತ; ತಂದೆ-ಮಗ ಸ್ಥಳದಲ್ಲೇ ದುರ್ಮರಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ