Karnataka News

*ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ: ಮಾದಕ ವಸ್ತು ಸಾಗಿಸುತ್ತಿದ್ದಾಗಲೇ ಸಿಕ್ಕಿ ಬಿದ್ದ ಮೂವರು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಿಂದ ಮಂಗಳೂರಿಗೆ ಬಾಡಿಗೆ ಕಾರಿನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲಿಸರು ಬಂಧಿಸಿದ್ದಾರೆ.

ಶಾಜಹಾನ್, ಮೊಹಮ್ಮದ್ ನಿಸಾರ್, ಮನ್ಸೂರ್ ಬಂಧಿತ ಆರೋಪಿಗಳು. ಬೆಂಗಳೂರಿನಿಂದ ಬಾಡಿಗೆ ಕಾರು ಮಾಡಿಕೊಂಡು ಮಂಗಳೂರಿಗೆ ಡ್ರಗ್ಸ್ ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಕಾರು ಪರಿಶೀಲಿಸಿದಾಗ ಮೂವರು ಎಂಡಿಎಂಎ ಸಮೇತ ಸಿಕ್ಕಿಬಿದ್ದಿದ್ದಾರೆ.

Home add -Advt

ಬಂಧಿತರಿಂದ 2.10 ಲಕ್ಷ ಮೌಲ್ಯದ 42 ಗ್ರಾಂ ಎಂಡಿಎಂಎ ಜಪ್ತಿ ಮಾಡಲಾಗಿದೆ. ಬಂಧಿತರು ಕರ್ನಾಟಕ ಹಾಗೂ ಕೇರಳ ರಾಜ್ಯದ ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದರು ಎಂಬುದು ತಿಳಿದುಬಂದಿದೆ. ಇನ್ನಷ್ಟು ಆರೋಪಿಗಳಿಗಾಗಿ ಶೋಧಕಾರ್ಯಾಚರಣೆ ಮುಂದುವರೆದಿದೆ.

ಮಂಗಳೂರಿನ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button