*ಕಾಂಗ್ರೆಸ್ ಪರ ಪ್ರಚಾರ ಮಾಡಿದಕ್ಕೆ ವ್ಯಕ್ತಿಯ ಹತ್ಯೆ?*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ.  ಜಾವೀದ್ ಚಿನ್ನಮಳ್ಳಿ (27) ಎಂಬವರನ್ನು ಹತ್ಯೆಗೈದ ದುಷ್ಕರ್ಮಿಗಳು ಮೃತದೇಹವನ್ನು ಬಾವಿಗೆ ಎಸೆದಿದ್ದಾರೆ. ದುಷ್ಕರ್ಮಿಗಳು ಜಾವೀದ್​​ರನ್ನು ಅಮಾವಾಸ್ಯೆ ದಿನ ಪಾರ್ಟಿ ಮಾಡಲು ಕರೆದೊಯ್ದಿದ್ದರು. ಜಮೀನಿನಲ್ಲಿ ಪಾರ್ಟಿ ಮಾಡಿದ್ದರು. ನಂತರ ಹತ್ಯೆ ಮಾಡಿ ಬಾವಿಗೆ ಎಸೆದಿದ್ದಾರೆ. ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಹತ್ಯೆಗೈದ ಆರೋಪ ಕೇಳಿಬಂದಿದೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.‌ *ಲೋಕದ … Continue reading *ಕಾಂಗ್ರೆಸ್ ಪರ ಪ್ರಚಾರ ಮಾಡಿದಕ್ಕೆ ವ್ಯಕ್ತಿಯ ಹತ್ಯೆ?*