Belagavi NewsBelgaum NewsCrimeKannada NewsKarnataka NewsLatest

*ಬೆಳಗಾವಿಯಲ್ಲಿ ಮರ್ಮಾಂಗ ಕತ್ತರಿಸಿ ವ್ಯಕ್ತಿಯ ಮರ್ಡರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನ ಶವ ಕೋಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ ಎಂಬುದು ತಿಳಿದುಬಂದಿದೆ. 

ಕಲ್ಮೇಶ್ ಕೋಟಿ (50) ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಮೆಕ್ಕೆಜೋಳ ಗದ್ದೆಯಲ್ಲಿ ಕಲ್ಮೇಶ್ ಅವರ ಶವ ಪತ್ತೆಯಾಗಿದೆ. ಹತ್ತು ದಿನಗಳ ಹಿಂದಷ್ಟೇ ಗ್ರಾಮಕ್ಕೆ ಬಂದಿದ್ದರು. ನಾಲ್ಕು ದಿನಗಳ ಹಿಂದೆ ನಡೆದಿರುವ ಈ ಕೊಲೆ ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದುಷ್ಕರ್ಮಿಗಳು ಕಲ್ಮೇಶ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದು, ಬಳಿಕ ಮರ್ಮಾಂಗ ಕತ್ತರಿಸಿ ವಿಕೃತಿ ಮೆರೆದಿರುವುದು ಬೆಳಕಿಗೆ ಬಂದಿದೆ. ಹಣಕಾಸು, ಆಸ್ತಿ ಹಾಗೂ ಮಹಿಳೆ ಸಂಬಂಧಿತ ವಿಚಾರಗಳಿಗೆ ಕೊಲೆ ಆಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಎಸ್‌ಪಿ ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕಿತ್ತೂರಿನ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button