*ಅಣ್ಣನ ಮೇಲೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಮ್ಮ*

ಪ್ರಗತಿವಾಹಿನಿ ಸುದ್ದಿ: ಅಣ್ಣ-ತಮ್ಮನ ನಡುವಿನ ಜಗಳ ವಿಕೋಪಕ್ಕೆ ತಿರುಗಿದ್ದು, ಅಣ್ಣನ ಮೇಲೆಯೇ ತಮ್ಮ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೋಡಿಂಬಾಳ ಬಳಿಯ ಕೋರಿಯರ್ ಎಂಬಲ್ಲಿ ಈ ಘಟನೆ ನಡೆದಿದೆ. ನಿಂಗಪ್ಪ ಎಂಬಾತ ತನ್ನ ಅಣ್ಣ ಹನುಮಪ್ಪ ಮೇಲೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಹತ್ಯೆಗೆ ಯತ್ನಿಸಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಹುನುಮಪ್ಪನನ್ನು ಕಡಬ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಆರೋಪಿಯನ್ನು ಬಂಧಿಸಿದ್ದಾರೆ. … Continue reading *ಅಣ್ಣನ ಮೇಲೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಮ್ಮ*