Kannada NewsKarnataka NewsLatest

*ಹೈಟೆನ್ಶನ್ ವಿದ್ಯುತ್ ವೈರ್ ಹಿಡಿದುಕೊಂಡು ಯುವಕ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಯುವಕನೊಬ್ಬ ಹೈಟೆನ್ಶನ್ ವಿದ್ಯುತ್ ವೈರ್ ಹೊಡಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಅಂಬಳೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಂದಹಳ್ಳಿಯ ನಾಗರಾಜು (28) ಆತ್ಮಹತ್ಯೆಗೆ ಶರಣಾದವರು.

ಆತ್ಮಹತ್ಯೆ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಯಳಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button