Latest

ಕನ್ನಡದ ಮತ್ತೋರ್ವ ಹಿರಿಯ ನಟನಿಗೆ ಹೃದಯಾಘಾತ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮನದೀಪ್ ರಾಯ್ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕನ್ನಡದಲ್ಲಿ 5000 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸುರುವ ಮನದೀಪ್ ರಾಯ್, ಅವರಿಗೆ ಮೂರು ದಿನಗಳ ಹಿಂದೆ ಹೃದಯಾಘಾತವಾಗಿತ್ತು. ಬೆಂಗಳೂರಿನ ಶೇಷಾದ್ರಿಪುರಂ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಮನದೀಪ್ ರಾಯ್ ಅವರ ಆರೋಗ್ಯ ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದು, ಆದರೆ ಇನ್ನೂ ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಹಾಸ್ಯಕಲಾವಿದರಾಗಿ ಅಭಿನಯಿಸಿರುವ ಮನದೀಪ್ ರಾಯ್, ಅನಂತ್ ನಾಗ್, ಶಂಕರ್ ನಾಗ್, ಡಾ.ರಾಜ್ ಕುಮಾರ್ ಸೇರಿದಂತೆ ಮೇರು ನಟರೊಂದಿಗೆ ಅಭಿನಯಿಸಿದ್ದರು. ಮಿಂಚಿನ ಓಟ, ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತ ರಕ್ಷಕ, ಆಂಟಿ ಪ್ರೀತ್ಸೆ, ಪ್ರೀತ್ಸೋದ್ ತಪ್ಪಾ? ಸೇರಿದಂತೆ ಹಲವು ಚಿತ್ರಗಳಲ್ಲಿ ಮನೋಜ್ಞವಾಗಿ ಅಭಿನಯಿಸಿದ್ದರು.

Home add -Advt

ಬಾಲಿವುಡ್ ನಟನ ಜಾಗ ಒತ್ತುವರಿ; IAS ಅಧಿಕಾರಿ ರೋಹಿಣಿ ಸಿಂಧೂರಿ ಪತಿಯ ವಿರುದ್ಧ ದೂರು

https://pragati.taskdun.com/rohini-sindhuriland-encroachmentlucky-alicomplaint/

Related Articles

Back to top button