
ಪ್ರಗತಿವಾಹಿನಿ ಸುದ್ದಿ: ಸ್ನೇಹಿತನ ಮನೆಯ ಗೃಹ ಪ್ರವೇಶಕ್ಕೆಂದು ಬಂದವನು ಕಾವೇರಿ ನದಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಮಹದೇವಪುರ ಬಳಿ ನಡೆದಿದೆ.
ಮಹ್ರ‍್ಶ್ ಮೃತ ವ್ಯಕ್ತಿ. ಮೈಸೂರಿನ ವಿಕ್ರಾಂತ್ ಕಾರ್ಖಾನೆಯ ಉದ್ಯೋಗಿ. ಗೃಹಪ್ರವೇಶಕ್ಕೆಂದು ಸ್ನೇಹಿತನ ಮನೆಗೆ ಶ್ರೀರಂಗಪಟ್ಟಣಕ್ಕೆ ಬಂದಿದ್ದ. ಈ ವೇಳೆ ಗೆಳೆಯರ ಜೊತೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದರು.
ನೀರಿನಲ್ಲಿ ಮುಳುಗಿ ಮಹೇಶ್ ಸಾವನ್ನಪ್ಪಿದ್ದಾರೆ. ಅರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.