
ಪ್ರಗತಿವಾಹಿನಿ ಸುದ್ದಿ: ಕಾಂಪೌಂಡ್ ಗೋಡೆ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆನೆಕಲ್ ಬಳಿಯ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.
ರಾಯಚೂರು ಜಿಲ್ಲೆಯ ದೇವದುರ್ಗ ಮೂಲದ ಪರಶುರಾಮ ಮೃತರು. ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ. ಪೈಪ್ ಅಳವಡಿಕೆ ಮಡಲೆಂದು ಮಣ್ಣು ಅಗೆಯುತ್ತಿದ್ದಗ ಕಾಂಪೌಂಡ್ ಕುಸಿದುಬಿದ್ದಿದೆ.
ಮಣ್ಣಿನಡಿ ಸಿಲುಕಿ ಕೂಲಿಕಾರ್ಮಿಕ ಪರಶುರಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೋರ್ವನನ್ನು ರಕ್ಷಿಸಲಾಗಿದೆ. ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ