Belagavi NewsBelgaum News

*ಮಂಡೋಳಿ: ಮುಖ್ಯ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ಮುಖ್ಯ ರಸ್ತೆ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನ ಪ್ರತಿನಿಧಿಗಳೊಂದಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿ ಗ್ರಾಮಸ್ಥರ ಸಮುಖದಲ್ಲಿ ಚಾಲನೆ ನೀಡಿದರು.

ಈ ಭಾಗದ ಶಾಸಕರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ರಸ್ತೆ ಕಾಮಗಾರಿಗೆ ಅನುದಾನ ಮಂಜೂರಾಗಿದೆ. ಕ್ಷೇತ್ರವನ್ನು ಮಾದರಿಯಾಗಿಸುವ ಹಿನ್ನೆಲೆಯಲ್ಲಿ ನಿರಂತರ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ತಮ್ಮ ಅನಾರೋಗ್ಯದ ನಡುವೆಯೂ ಕ್ಷೇತ್ರದ ಅಭಿವೃದ್ಧಿಗೆ ತಡೆ ಇಲ್ಲದಂತೆ ನಿರ್ದೇಶನಗಳನ್ನು ನೀಡುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ತಮ್ಮ ತಂಡದ ಮೂಲಕ ಕೆಲಸಗಳನ್ನು ಮಾಡಿಸುತ್ತಿದ್ದಾರೆ ಎಂದು ಮೃಣಾಲ ಹೆಬ್ಬಾಳಕರ್ ತಿಳಿಸಿದರು.

ಈ ಸಂದರ್ಭದಲ್ಲಿ ಮಾರುತಿ ಮನ್ನೊಳಕರ್, ಕಲ್ಲಪ್ಪ ಸಾಳವಿ, ಜ್ಯೋತಿಬಾ ಪಾಟೀಲ, ಭರತ್ ಪಾಟೀಲ, ಕೇದಾರಿ ಕಣಬರಕರ್, ಸಂತೋಷ ತಳವಾರ, ಸುತಾರ್ ಮೆಡಮ್, ಮಾರುತಿ ಪಾಟೀಲ, ಶೀತಲ್ ದಳವಿ, ಅಮೃತ್ ಕದಂ, ಸತ್ತು ಸಾಳವಿ, ಕೃಷ್ಣ ಶಹಾಪೂರಕರ್ ಉಪಸ್ಥಿತರಿದ್ದರು .

Home add -Advt

Related Articles

Back to top button