Latest

ಜಡಿ ಮಳೆ- ಶೀತಗಾಳಿ ಎಚ್ಚರಿಕೆ; 10 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮಿಳುನಾಡಿನಲ್ಲಿ ಮಾಂಡೌಸ್ ಚಂಡಮಾರುತ ಅಪ್ಪಳಿಸಿದ್ದು, ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ ಜನರು ತತ್ತರಿಸಿದ್ದಾರೆ. ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೂ ಆಗಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಜಾನೆಯಿಂದಲೇ ಜಡಿ ಮಳೆ, ಮೈಕೊರೆಯುವ ಶೀತಗಾಳಿ ಆರಂಭವಾಗಿದೆ.

ಬೆಂಗಳೂರಿನಲ್ಲಿ ವಿಪರೀತ ಚಳಿ, ಮಳೆಯಿಂದಾಗಿ ಮನೆಯಿಂದ ಹೊರಬರಲೂ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ ಹಾಗೂ ಶೀತಗಾಳಿ ಹೆಚ್ಚಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಾಪಮಾನ ಕ್ಷಣ ಕ್ಷಣಕ್ಕೂ ಕುಸಿಯುತ್ತಿದ್ದು, ರಾಜಧಾನಿ ಸಂಪೂರ್ಣ ಥಂಡಾ ಆಗಿದೆ.

Home add -Advt

ಮಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದ 10 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದಿಂದಾಗಿ ದಕ್ಷಿಣ ಹಾಗೂ ಕರಾವಳಿ ಕರ್ನಾಟಕದ ಭಾಗದಲ್ಲಿ ಹಗುರ ಮಳೆಯಾಗಲಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನೆಲೆಯಲ್ಲಿ ಮಾಂಡೌಸ್ ಚಂಡಮಾರುತವಾಗಿ ಅಪ್ಪಳಿಸಿದೆ. ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಗುಡುಗು ಸಹಿತ ಮಳೆಯಾಗಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭೀಕರ ಅಪಘಾತ; ಮಗು ಸೇರಿ ಮೂವರು ದುರ್ಮರಣ

https://pragati.taskdun.com/bus-caraccident3-deathudupi/

Related Articles

Back to top button