
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್, ಸೈನ್ ಬೋರ್ಡ್ ಗೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ನಾಗಲಮಂಗಲ ತಾಲೂಕಿನ ಬೆಳ್ಳೂರು ಟೋಲ್ ಬಳಿ ಈ ದುರಂತ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಬೆಳ್ಳೂರು ಬಳಿ ಸೈನ್ ಬೋರ್ಡ್ ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿ ಬಿದ್ದಿದೆ. ಅಪಘಾತದಲ್ಲಿ ಬಸ್ ಕ್ಲೀನರ್ ಅಶೋಕ್ (25) ಹಾಗೂ ಕಸ್ತೂರ್ ಶಾನ್ ಬಾಗ್ 64) ಎಂಬುವವರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಬೆಳ್ಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.



