
ಪ್ರಗತಿವಾಹಿನಿ ಸುದ್ದಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಂಡ್ಯದಲ್ಲಿ ನಡೆದಿದ್ದ ಹೆಣ್ಣುಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬನ್ನೂರಿನ ರಾಮಕೃಷ್ಣ, ಗುರು, ಮೈಸೂರಿನ ಸೋಮಶೇಖರ್ ಬಂಧಿತ ಆರೋಪಿಗಳು. ಬಂಧಿತರಿಂದ 2 ಸ್ಕ್ಯಾನಿಂಗ್ ಯಂತ್ರ, ಒಂದು ಕಾರು ಕಾಶಕ್ಕೆ ಪಡೆಯಲಾಗಿದೆ.
ಮಂಡ್ಯ ಭ್ರೂಣಪತ್ತೆ ಹಾಗೂ ಹತ್ಯೆ ಪ್ರಕರಣದಲ್ಲಿ ಈವರೆಗೆ 12 ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಮತ್ತೆ ಮೂವರನ್ನು ಬಂಧಿಸಲಾಗಿದೆ. ಇನ್ನೂ ಆರೇಳು ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ತನಿಖೆ ಮುಂದುವರೆದಿದೆ.