*ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಕಾಮುಕ ಶಿಕ್ಷಕನ ವಿರುದ್ಧ ಶಿಕ್ಷಣ ಇಲಾಖೆಗೆ ಪತ್ರ ಬರೆದ ವಿದ್ಯಾರ್ಥಿನಿಯರು*
ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಸರ್ಕಾರಿ ಪ್ರೌಢಶಾಲೆಯ ಶಿಕ್ಷಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ವಿದ್ಯಾರ್ಥಿನಿಯರು ಕಾಮುಕ ಶಿಕ್ಷಕನ ವರ್ತನೆಗೆ ಬೇಸತ್ತು ಶಿಕ್ಷಣ ಇಲಾಖೆಗೆ ಪತ್ರ ಬರೆದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ತಾಲೂಕಿನ ಬೇಬಿ ಸರ್ಕಾರಿ ಫೌಢಶಾಲೆಯ ಶಿಕ್ಷಕ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಶಿಕ್ಷಕನ ನಡೆಗೆ ನೊಂದ ವಿದ್ಯಾರ್ಥಿನಿಯರು ಶಿಕ್ಷಣ ಇಲಾಖೆಗೆ ಪತ್ರ ಬರೆದು ನೋವು ತೋಡಿಕೊಂಡಿದ್ದಾರೆ.
ವಿದ್ಯಾರ್ಥಿನಿಯರ ಪತ್ರದ ಬೆನ್ನಲ್ಲೇ ಎಸ್ ಡಿಎಂ ಸಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಶಿಕ್ಷಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪೋಷಕರು ಆತನ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.
ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಸೌಭಾಗ್ಯ ಭೇಟಿ ನೀಡಿದ್ದು, ಆರೋಪಿ ಶಿಕ್ಷಕನನ್ನು ತಕ್ಷಣ ಅಮಾನತುಗೊಳಿಸುವಂತೆ ಪೋಷಕರು ಒತ್ತಾಯಿಸಿದ್ದಾರೆ.
*ಏಕಾಏಕಿ ಮನೆಗೆ ನುಗ್ಗಿ ವೈದ್ಯೆಯನ್ನೇ ಕಿಡ್ನ್ಯಾಪ್ ಮಾಡಿದ ದುಷ್ಕರ್ಮಿಗಳು; ಅಪಹರಣದ ವಿಡಿಯೋ ವೈರಲ್*
https://pragati.taskdun.com/over-100-men-storm-into-housekidnap-lady-doctorattack-familytelangana16-arrested/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ