Kannada NewsKarnataka NewsLatest

*ತಲೆಯ ಮೇಲೆ ಮುರಿದುಬಿದ್ದ ವಿದ್ಯುತ್ ಕಂಬ: ಲೈನ್ ಮೆನ್ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ವಿದ್ಯುತ್ ಲೈನ್ ದುರಸ್ತಿ ಮಾಡುವ ವೇಳೆ ಘೋರ ದುರಂತವೊಂದು ಸಂಭವಿಸಿದ್ದು, ಕರೆಂಟ್ ಕಂಬ ತಲೆ ಮೇಲೆ ಮುರಿದು ಬಿದ್ದು ಲೈನ್ ಮೆನ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಸನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕುಲುಮೆದೊಡ್ಡಿ ಗ್ರಾಮದ ಕುಮಾರ್ (31) ಮೃತ ದುರ್ದೈವಿ.

ವಿದ್ಯುತ್ ಲೈನ್ ಸರಿಪಡಿಸುತ್ತಿದ್ದ ವೇಳೆ ಏಕಾಏಕಿ ವಿದ್ಯುತ್ ಕಂಬವೇ ಮುರಿದುಬಿದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button