Kannada NewsKarnataka NewsLatest

*ಹೆಲ್ಮೆಟ್ ತಪಾಸಣೆಗೆ ಬೈಕ್ ಅಡ್ಡಗಟ್ಟಿದ ಟ್ರಾಫಿಕ್ ಪೊಲೀಸರು: ಏಕಾಏಕಿ ಬ್ರೇಕ್ ಹಾಕುತ್ತಿದ್ದಂತೆ ಆಯತಪ್ಪಿ ಕೆಳಗೆ ಬಿದ್ದ ಮಗು ಸ್ಥಳದಲ್ಲೇ ಸಾವು!*

ಪ್ರಗತಿವಾಹಿನಿ ಸುದ್ದಿ: ಮಗುವಿಗೆ ನಾಯಿ ಕಚ್ಚಿದ್ದಕ್ಕೆ ಗಡಿಬಿಡಿಯಲ್ಲಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಟ್ರಾಫಿಕ್ ಪೊಲೀಸ್ ಮಾಡಿದ ಎಡವಟ್ಟಿನಿಂದಾಗಿ ಬೈಕ್ ನಿಂದ ಬಿದ್ದ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮಂಡ್ಯದಲ್ಲಿ ನಡೆದಿದೆ.

ನಾಯಿಕಚ್ಚಿದ ಕಾರಣ ತಕ್ಷಣ ಮಗುವನ್ನು ತಂದೆ-ತಾಯಿ ಬೈಕ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಈ ವೇಳೆ ಗಡಿಬಿಡಿಯಲ್ಲಿ ಹೆಲ್ಮೆಟ್ ಮರೆತಿದ್ದಾರೆ. ಹೆಲ್ಮೆಟ್ ಇಲ್ಲದೇ ಮಗು ಸಮೇತ ಬೈಕ್ ನಲ್ಲಿ ಬರುತ್ತಿದ್ದವರನ್ನು ಕಂಡು ಟ್ರಾಫಿಕ್ ಪೊಲೀಸರು ಬೈಕ್ ಅಡ್ಡಗಟ್ಟಿದ್ದಾರೆ. ಈ ವೇಳೆ ಬೈಕ್ ಸವಾರ ಏಕಾಏಕಿ ಬ್ರೇಕ್ ಹಾಕುತ್ತಿದ್ದಂತೆ ಆಯತಪ್ಪಿ ಬೈಕ್ ನಲ್ಲಿದ್ದ ಮೂವರು ಕೆಳಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಮಗುವಿನ ತಲೆ ನೆಲಕ್ಕಪ್ಪಳಿಸಿದ ಪರಿಣಾಮ ತಲೆಯಿಂದ ರಕ್ತ ಚಿಮ್ಮಿದ್ದು, ತೀವ್ರ ರಕ್ತಸ್ರಾವದಿಂದಾಗಿ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.

ಮೂರುವರೆ ವರ್ಷದ ಹೃತಿಕ್ಷಾ ಮೃತ ಮಗು. ನಡುರಸ್ತೆಯಲ್ಲಿಯೇ ತಾಯಿಯ ಮಡಿಲಲ್ಲೇ ಕಂದಮ್ಮ ನರಳಿ ನರಳಿ ಸಾವನ್ನಪ್ಪಿದ್ದು, ಈ ದೃಶ್ಯ ಕಣ್ಣಾರೆ ಕಂಡ ಸಾರ್ವಜನಿಕರು ಟ್ರಾಫಿಕ್ ಪೊಲೀಸರ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button