
ಪ್ರಗತಿವಾಹಿನಿ ಸುದ್ದಿ: ವಿಸಿ ನಾಲೆಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಬೈಕ್ ನಾಲೆಗೆ ಉರುಳಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಸಗಾವಿ ಗ್ರಾಮದ ವಿಸಿ ನಾಲೆ ಬಳಿಯ ತಡೆ ಗೋಡೆಗೆ ಡಿಕ್ಕಿ ಹೊಡೆದ ಬೈಕ್, ನಾಲೆಗೆ ಉರುಳಿ ಬಿದ್ದಿದೆ. ಬೈಕ್ ನಲ್ಲಿದ್ದ ಇಬ್ಬರೂ ಸಾವನ್ನಪ್ಪಿದ್ದಾರೆ.
ಮೃತರನ್ನು ರಾಮಣ್ಣ (70) ಹಾಗೂ ಮದ್ದೂರಿುನ ಭರತ್ (19) ಎಂದು ಗುರುತಿಸಲಾಗಿದೆ. ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.