ಪ್ರಗತಿವಾಹಿನಿ ಸುದ್ದಿ: ನಾಳೆ ಡಿ.20ರಿಂದ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಾಹಿತ್ಯ ಜಾತ್ರೆಗೆ ಬರುವವರಿಗಾಗಿ ಕೆ.ಎಸ್.ಆರ್.ಟಿ.ಸಿಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಮಾತ್ರವಲ್ಲದೇ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಡಿ.20ರಿಂದ 22ರವರೆಗೆ ಮೂರು ದಿನಗಳ ಕಾಲ ಮಂಡ್ಯದಲ್ಲಿ ನುಡಿ ಜಾತ್ರೆ ನಡೆಯಲಿದ್ದು, ಅಕ್ಷರ ಜಾತ್ರೆಗಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ನಡೆಸಲು ರಾಜ್ಯ ಸರ್ಕಾರ, ಕನ್ನಡ ಸಾಹಿತ್ಯ ಪರಿಷತ್ ಮತ್ತು ಮಂಡ್ಯ ಜಿಲ್ಲಾಡಳಿತ ಈಗಾಗಲೇ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದೆ. ಮಂಡ್ಯ ಹೊರವಲಯದ ಶ್ರೀನಿವಾಸ್ ಪುರದ ಬಳಿ ಸುಮಾರು 60 ಎಕರೆ ಪ್ರದೇಶದಲ್ಲಿ ನುಡಿಹಬ್ಬವನ್ನ ಆಚರಣೆ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ.
ನಾಡು-ನುಡಿ ಬಗ್ಗೆ ಅಭಿಮಾನ ಮೂಡಿಸುವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಭಾಗಿಯಾಗಬೇಕು. ಈ ನಿಟ್ತಿನಲ್ಲಿ ಮಂಡ್ಯ ಜಿಲ್ಲಾಡಳಿತ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಡಿ.20, 21 ಎರಡು ದಿನ ರಜೆ ಘೋಷಣೆ ಮಾಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ