CrimeKarnataka NewsLatest

*ಎರಡು ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಎರಡು ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜಯನಗರದಲ್ಲಿ ಈ ದುರಂತ ಸಂಭವಿಸಿದೆ. ದರ್ಶನ್ ಹಾಗೂ ದಿವ್ಯಶ್ರೀ ಆತ್ಮಹತ್ಯೆಗೆ ಶರಣಾದ ದಂಪತಿ.

ಮೂರು ವರ್ಷಗಳ ಹಿಂದೆ ದರ್ಶನ್ ಹಾಗೂ ದಿವ್ಯಶ್ರೀ ಮದುವೆಯಾಗಿದ್ದರು, ದಂಪತಿಗೆ ಎರಡು ವರ್ಷದ ಮಗುವಿದೆ. ಮಗುವಿನ ಕತ್ತು ಹಿಸುಕಿ ಬಳಿಕ ತಾವೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪೋಷಕರು ಮಗುವನ್ನು ಕೊಲ್ಲಲು ಯತ್ನಿಸಿ ಕತ್ತು ಹಿಸುಕಿದ್ದಾರೆ. ಆದರೆ ಅದೃಷ್ತವಶಾತ್ ಮಗು ಬದುಕುಳಿದಿದೆ. ಸದ್ಯ ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಂಪತಿ ಯಾವ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಬಗ್ಗೆ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button