
ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಮದ್ದೂರು ಠಾಣೆ ಪೊಲಿಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೆಲ ದಿನಗಳ ಹಿಂದೆ ಮಂಡ್ಯ ಮೂಲದ ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತರು ಸಾಮೂಹಿಕ ಅತ್ಯಾಚಾರವೆಸಗಿದ್ದರು. ಪೈಶಾಚಿಕ ಕೃತ್ಯದ ವಿಡಿಯೋವನ್ನು ಮೊಬೈಲ್ ನಲ್ಲಿ ಚಿತ್ರಿಸಿಕೊಂಡಿದ್ದ ಕಾಮುಕರು ಬಾಲಕಿಗೆ ಬೆದರಿಸುತ್ತಿದ್ದರು. ಕರೆದಾಗಲೆಲ್ಲ ಬರಬೇಕು ಇಲ್ಲವಾದಲ್ಲಿ ವಿಡಿಯೋ ವೈರಲ್ ಮಾಡುವುದಾಗಿ ಹೆದರಿಸಿದ್ದರು.
ಯುವ ದಸರಾಕ್ಕೆ ಹೋಗಿದ್ದ ಸಂದರ್ಭದಲ್ಲಿ ಬಾಲಕಿಗೆ ಓರ್ವ ಯುವಕನ ಪರಿಚಯವಾಗಿತ್ತು. ಆತ ಬಾಲಕಿಯನ್ನು ಪುಸಲಾಯಿಸಿ ಕರೆಸಿಕೊಂಡು ತನ್ನ ಸ್ನೇಹಿತರೊಂದಿಗೆ ಸೇರಿ ಬಾಲಕಿ ಮೇಲೆ ಗ್ಯಾಂಗ್ ರೆಪ್ ನಡೆಸಿದ್ದರು. ಘಟನೆ ಬಳಿಕ ಬಾಲಕಿ ಮನೆಯಲ್ಲಿ ವಿಷಯ ತಿಳಿಸಿದ್ದಳು. ಬಾಲಕಿ ತಂದೆ ಮದ್ದೂರು ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ