ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ನಡೆದ ಬಾಲಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಹಿತಿ ಬಹಿರಂಗವಾಗಿದೆ. ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂಬುದು ತನಿಖೆಯಿದ ತಿಳಿದುಬಂದಿದೆ.
ಟ್ಯೂಷನ್ ಹೇಳಿಕೊಡುವ ನೆಪದಲ್ಲಿ ಕರೆದ ಆರೋಪಿ ಬಾಲಕಿ ಮೇಲೆ ಅತ್ಯಾಚಾರ ನದೆಸಿ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ. ಆರೋಪಿ ಕಾಂತರಾಜ್ ಬಾಲಕಿಯನ್ನು ಟ್ಯೂಷನ್ ಗೆ ಎಂದು ಕರೆಸಿಕೊಂಡಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಬಳಿಕ ವಿಷಯ ಹೊರಗೆ ಗೊತ್ತಾದರೆ ತೊಂದರೆ ಎಂದು ಬಾಲಕಿ ತಲೆಗೆ ರಾಡ್ ನಿಂದ ಹೊಡೆದು ಬಳಿಕ ಕತ್ತು ಹಿಸುಕಿ ಸಾಯಿಸಿದ್ದಾನೆ.
ಮರಣೋತ್ತರ ಪರೀಕ್ಷೆಯಲ್ಲಿ ಸತ್ಯ ಬಹಿರಂಗವಾಗಿದ್ದು, ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದು ಸಾಬೀತಾಗಿದೆ.
ಮಳವಳ್ಳಿಯಲ್ಲಿ ಟ್ಯೂಷನ್ ಕ್ಲಾಸ್ ಹಿಂಭಾಗದ ನಿರ್ಮಾಣ ಹಂತದ ಕಟ್ಟಡದ ಸಂಪ್ ನಲ್ಲಿ ದಿವ್ಯಾ ಎಂಬ ಬಾಲಕಿಯೊಬ್ಬಳ ಶವ ಪತ್ತೆಯಾಗಿತ್ತು. ಪೊಲೀಸರು ಮೃತದೇಹವನ್ನು ವಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಇದೀಗ ಮರಣೋತ್ತರ ಪರೀಕ್ಷಾ ವರದಿ ಬಂದಿದ್ದು ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು ಬಳಿಕ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
PSI ನೇಮಕಾತಿ ಅಕ್ರಮ; ಮತ್ತೆ ಮೂವರು ಅರೆಸ್ಟ್
https://pragati.taskdun.com/latest/psi-scam3-accused-arrestedcid/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ