*ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆಯನ್ನು ಕೊನೆಗೂ ಸೆರೆ ಹಿಡಿದ ಅರಣ್ಯ ಸಿಬ್ಬಂದಿ*

ನಿಟ್ಟುಸಿರು ಬಿಟ್ಟ ಗ್ರಾಮಸ್ಥರು ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಡುಪ್ರಾಣಿಗಳು ಹಾಗೂ ಮಾನವನ ನಡುವಿನ ಸಂಘರ್ಷ ಮುಂದುವರೆದಿದೆ. ಚಿರತೆ, ಕಾಡಾನೆಗಳ ದಾಳಿಗೆ ಹಲವು ಗ್ರಾಮಸ್ಥರು ಕಂಗೆಟ್ಟಿದ್ದಾರೆ. ಈ ನಡುವೆ ಕಳೆದ ಒಂದು ತಿಂಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚುರತೆಯನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೆಚ್.ಹೊಸಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೆಚ್.ಹೊಸಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಜನರು ಆತಂಕಕ್ಕೀಡಾಗಿದ್ದರು. ಕಳೆದ ಒಂದು ತಿಂಗಳಿಂದ ಜನಸಾಮಾನ್ಯರು ಹಾಗೂ … Continue reading *ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆಯನ್ನು ಕೊನೆಗೂ ಸೆರೆ ಹಿಡಿದ ಅರಣ್ಯ ಸಿಬ್ಬಂದಿ*