Kannada NewsKarnataka NewsLatest

*ಹನುಮ ಧ್ವಜ ವಿವಾದ: ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ*

ಪ್ರಗತಿವಾಹಿನಿ ಸುದ್ದಿ: ಗ್ರಾಮಸ್ಥರ ವಿರೋಧದ ನಡುವೆಯೂ ಮಂಡ್ಯ ಜಿಲ್ಲಾಡಳಿತ ಕೆರಗೋಡು ಗ್ರಾಮದಲ್ಲಿ ಬೃಹತ್ ಹನುಮ ಧ್ವಜ ತೆರವು ಮಾಡಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರದಲ್ಲಿ ಬೃಹತ್ ಹನುಮ ಧ್ವಜ ಹಾರಿಸಲಾಗಿತ್ತು. ಇದೀಗ ತಾಲೂಕು ಪಂಚಾಯಿತಿ ಅಧಿಕಾರಿಗಳು ಈ ಧ್ವಜ ತೆರವಿಗೆ ಮುಂದಾಗುತ್ತಿದ್ದಂತೆ ಗ್ರಾಮಸ್ಥರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.

Home add -Advt

ಧ್ವಜ ಕಂಬವನ್ನು ಸುತ್ತುವರಿದು ನಿಂತು ಅಧಿಕಾರಿಗಳನ್ನು ಧ್ವಜಕಟ್ಟೆಯತ್ತ ಬರಲು ಬಿಡದೇ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಅಲ್ಲದೇ ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.

ಗ್ರಾಮಸ್ಥರ ವಿರೋಧದ ನಡುವೆಯೂ ಜಿಲ್ಲಾಡಳಿತ ಹನುಮ ಧ್ವಜ ತೆರವು ಮಾಡಿದೆ. ಜಿಲ್ಲಾಡಳಿತದ ಕ್ರಮ ಖಂಡಿಸಿ ಹಿಂದೂಪರ ಸಂಘಟನೆ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ಕೆರಗೋಡು ಗ್ರಾಮದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ.

Related Articles

Back to top button