*ಹನುಮ ಧ್ವಜ ವಿವಾದ: ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ*

ಪ್ರಗತಿವಾಹಿನಿ ಸುದ್ದಿ: ಗ್ರಾಮಸ್ಥರ ವಿರೋಧದ ನಡುವೆಯೂ ಮಂಡ್ಯ ಜಿಲ್ಲಾಡಳಿತ ಕೆರಗೋಡು ಗ್ರಾಮದಲ್ಲಿ ಬೃಹತ್ ಹನುಮ ಧ್ವಜ ತೆರವು ಮಾಡಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರದಲ್ಲಿ ಬೃಹತ್ ಹನುಮ ಧ್ವಜ ಹಾರಿಸಲಾಗಿತ್ತು. ಇದೀಗ ತಾಲೂಕು ಪಂಚಾಯಿತಿ ಅಧಿಕಾರಿಗಳು ಈ ಧ್ವಜ ತೆರವಿಗೆ ಮುಂದಾಗುತ್ತಿದ್ದಂತೆ ಗ್ರಾಮಸ್ಥರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. … Continue reading *ಹನುಮ ಧ್ವಜ ವಿವಾದ: ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ*