*ಹನುಮಧ್ವಜ ತೆರವಿಗೆ ವಿರೋಧಿಸಿ ಪ್ರತಿಭಟನೆ; ಪರಿಸ್ಥಿತಿ ಉದ್ವಿಗ್ನ; ಪೊಲೀಸರಿಂದ ಲಾಠಿ ಚಾರ್ಜ್*

ಪ್ರಗತಿವಾಹಿನಿ ಸುದ್ದಿ: ಬೃಹತ್ ಹನುಮ ಧ್ವಜ ತೆರವಿಗೆ ವಿರೋಧ ವ್ಯಕ್ತಪಡಿಸಿ ಗ್ರಾಮಸ್ಥರು ಪ್ರತಿಭಟನೆ ತೀವ್ರಗೊಳಿಸಿದ್ದು, ಪ್ರತಿಭಟನಾಕಾರರ ಮೇಲೆ ಲಘು ಲಾಠಿ ಪ್ರಹಾರ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆದಿದೆ. ಕೆರಗೋಡು ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, 144 ಸೆಕ್ಷನ್ ಜಾರಿ ಮಾಡಲಾಗಿದೆ. ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿಯೂ ಸಂಭ್ರಮ ಮನೆ ಮಾಡಿತ್ತು. ಈ ಹಿನ್ನೆಲೆಯಲ್ಲಿ 108 ಅಡಿ ಎತ್ತರದಲ್ಲಿ ಬೃಹತ್ ಹನುಮ ಧ್ವಜವನ್ನು ಹಾರಿಸಲಾಗಿತ್ತು. … Continue reading *ಹನುಮಧ್ವಜ ತೆರವಿಗೆ ವಿರೋಧಿಸಿ ಪ್ರತಿಭಟನೆ; ಪರಿಸ್ಥಿತಿ ಉದ್ವಿಗ್ನ; ಪೊಲೀಸರಿಂದ ಲಾಠಿ ಚಾರ್ಜ್*