
ಪ್ರಗತಿವಾಹಿನಿ ಸುದ್ದಿ; ಮಂಡ್ಯ: ವಕೀಲರೊಬ್ಬರನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ಶವನ್ನು ನದಿಗೆ ಎಸೆದು ಹೋಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನವಿಲೆ ಗ್ರಾಮದಲ್ಲಿ ನಡೆದಿದೆ.
ಜಮೀನಿಗೆ ಹೋಗುತ್ತಿದ್ದ ವಕೀಲ ರವೀಂದ್ರ (48) ಇದೀಗ ಶಿಂಷಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ವಕೀಲನನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.