Kannada NewsKarnataka NewsLatest

*ರಾಜ್ಯಕ್ಕೂ ಕಾಲಿಟ್ಟ ಮಹಾಮಾರಿ; ಮದ್ದೂರಿನ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆ*

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ದೇಶದಲ್ಲಿ ಮಾಹಾಮಾರಿ ಕೊರೊನಾ ಸೋಂಕಿನ ಅಟ್ಟಹಾಸ ಮತ್ತೆ ಆರಂಭವಾಗಿದ್ದು, ಕೇರಳದಲ್ಲಿ ಕೊರೊನಾ ಉಪತಳಿ JN.1 ವ್ಯಾಪಕವಾಗಿ ಹರಡುತ್ತಿದೆ. ಈ ನಡುವೆ ಕರ್ನಾಟಕದಲ್ಲಿಯೂ ಕೊರೊನಾ ಸೋಂಕು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವ್ಯಕ್ತಿಯೋರ್ವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್ ಭೀತಿ ಶುರುವಾಗಿದೆ.

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಗೆ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಈ ವೇಳೆ ಕೊರೊನಾ ಸೋಂಕು ದೃಢಪಟ್ಟಿದೆ. ಹತ್ತು ದಿನಗಳ ಹಿಂದೆಯೇ ಸೋಂಕು ಪತ್ತೆಯಾಗಿದ್ದು, ಚಿಕಿತ್ಸೆ ಮೂಲಕ ವ್ಯಕ್ತಿ ಗುಣಮುಖರಾಗಿದ್ದಾರೆ. ಇಂದು ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತಿದೆ.

ಇನ್ನು ವ್ಯಕ್ತಿ ಸಂಪರ್ಕದಲ್ಲಿದ್ದ ನಾಲ್ವರಿಗೂ ಪರೀಕ್ಷಸಲಾಗಿದ್ದು, ಅವರಲ್ಲಿ ಕೋವಿಡ್ ನೆಗೆಟಿವ್ ಬಂದಿದೆ ಎಂದು ತಿಳಿದುಬಂದಿದೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button