
ಪ್ರಗತಿವಾಹಿನಿ ಸುದ್ದಿ; ಮಂಡ್ಯ: ರಾಜ್ಯದ ಅತಿ ಹೆಚ್ಚು ಹಾಲು ಉತ್ಪಾದನೆ ಮಾಡುವ ಹಾಲು ಒಕ್ಕೂಟ ಮಂಡ್ಯ ಹಾಲು ಒಕ್ಕೂಟ ನಿಗಮ -ಮನ್ ಮುಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಮಂಡ್ಯದ ಮದ್ದೂರು ಬಳಿಯ ಗೆಜ್ಜಲಗೆರೆಯ ಮನ್ ಮುಲ್ ನ ತುಪ್ಪ ಹಾಗೂ ಖೋವಾ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಲವು ಯಂತ್ರೋಪಕರಣಗಳು ಬೆಂಕಿಗಾಹುತಿಯಾಗಿವೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಕಳೆದ ಐದು ತಿಂಗಳ ಹಿಂದಷ್ಟೇ ಮನ್ ಮುಲ್ ಮೆಗಾ ಡೈರಿ ಉದ್ಘಟನೆಗೊಂಡಿದ್ದು, ಇಂದು ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ