Latest

ಮಗನ ಸಾವು ಕಂಡು ತಾಯಿಯೂ ನಿಧನ

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಮಗ ಸಾವನ್ನಪ್ಪಿದ್ದ ಸುದ್ದಿ ಕೇಳುತ್ತಿದ್ದಂತೆ ಆಘಾತಕ್ಕೀಡಾದ ತಾಯಿಯೂ ಮೃತಪಟ್ಟ ದಾರುಣ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ.

ನಾಗಮಂಗಲ ತಾಲೂಕಿನ ಗಿಡುವಿನ ಹೊಸಳ್ಳಿ ಗ್ರಾಮದ ಕುಶಾಲ್ (45 ) ಹಾಗೂ ಅವರ ತಾಯಿ ಲಕ್ಷ್ಮಮ್ಮ (70) ಮೃತಪಟ್ಟವರು.

Home add -Advt

ಕುಶಾಲ್ ಭಾನುವಾರ ಸಂಜೆ ತಮ್ಮ ಮನೆಯಲ್ಲಿ ಟಿ ವಿ ನೋಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕಡಿಮೆ ರಕ್ತದೊತ್ತಡದ ಸಮಸ್ಯೆಯಿಂದ ( ಲೊ ಬಿಪಿ) ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರಲ್ಲಾಗಲೇ ಕುಶಾಲ್ ಕೊನೆಯುಸಿರೆಳೆದಿದ್ದರು. ಮಗ ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆ ಹೃದಯಾಘಾತಕ್ಕೀಡಾದ ತಾಯಿ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಏಕಾಏಕಿ ನಾಪತ್ತೆಯಾಗಿದ್ದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ ಶವವಾಗಿ ಪತ್ತೆ

Related Articles

Back to top button