Latest

ಅಪ್ರಾಪ್ತ ಬಾಲಕಿ ಮೇಲೆ ಪಕ್ಕದ ಮನೆ ತಾತನಿಂದಲೇ ಅತ್ಯಾಚಾರ

ಪ್ರಗತಿವಾಹಿನಿ ಸುದ್ದಿ; ಮಂಡ್ಯ: 61 ವರ್ಷದ ವೃದ್ಧನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ ಬಂದಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಆರೋಪಿಯನ್ನು 61 ವರ್ಷದ ವೆಂಕಟೇಶ್ ಎಂದು ಗುರುತಿಸಲಾಗಿದೆ. ಪಕ್ಕದ ಮನೆಯ ಬಾಲಕಿಯ ಮೇಲೆಯೇ ಕಣ್ಣುಹಾಕಿದ್ದ ವೃದ್ಧ ಬಾಲಕಿಯ ಪೋಷಕರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಅತ್ಯಾಚಾರ ನಡೆಸಿದ್ದಾನೆ.

Home add -Advt

ಬಾಲಕಿ ತಂದೆ-ತಾಯಿಗೆ ಪಕ್ಕದ ಮನೆಯ ತಾತ ತನ್ನನ್ನು ಕೆಟ್ಟದೃಷ್ಟಿಯಿಂದ ನೋಡುತ್ತಿರುವುದಾಗಿ ಹೇಳಿದರೂ, ಬಾಲಕಿಯೇ ತಪ್ಪಾಗಿ ಅರ್ಥೈಸಿಕೊಂಡಿದ್ದಾಳೆ. ಪಕ್ಕದ ಮನೆಯ ಹಿರಿಯರು, ತಾತ ಎಂದು ಬಾಲಕಿಗೇ ಬುದ್ಧಿ ಹೇಳಿ ಸುಮ್ಮನಾಗಿದ್ದಾರೆ. ಆದರೆ ಬಾಲಕಿ ಗರ್ಭಿಣಿಯಾದಾಗ ಪೋಷಕರಿಗೆ ವಿಷಯ ಅರ್ಥವಾಗಿದೆ. ಇದೀಗ ವೃದ್ಧ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

Related Articles

Back to top button