Latest

ಪುನೀತ್ ಅಗಲಿಕೆ; ಆಘಾತದಿಂದ ಊಟ ಬಿಟ್ಟಿದ್ದ ಅಭಿಮಾನಿ ಸಾವು

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಠಾತ್ ಸಾವಿನಿಂದ ಇಡೀ ಕನ್ನಡ ನಾಡು ಆಘಾತಕ್ಕೊಳಗಾಗಿದ್ದು, ಹಲವು ಅಭಿಮಾನಿಗಳು ದು:ಖ ತಾಳಲಾರದೇ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಇನ್ನು ಕೆಲ ಅಭಿಮಾನಿಗಳು ಹೃದಯಾಘಾತಕ್ಕೀಡಾಗಿದ್ದಾರೆ.

ಪುನೀತ್ ನಿಧನದಿಂದ ಆಘಾತಕ್ಕೊಳಗಾಗಿದ್ದ ಮಂಡ್ಯದ ಅಭಿಮಾನಿಯೋರ್ವ ಊಟ ಬಿಟ್ಟು ಕಳೆದ ಮೂರು ದಿನಗಳಿಂದ ಅಸ್ವಸ್ಥರಾಗಿದ್ದರು. ಮಂಡ್ಯದ ಕೆರಗೋಡು ಗ್ರಾಮದ ಕೆ.ಎಂ.ರಾಜೇಶ್ (50) ಡಾ.ರಾಜ್ ಕುಮಾರ್ ಹಾಗೂ ಪುನೀತ್ ಅವರ ಅಪ್ಪಟ ಅಭಿಮಾನಿ. ಡಾ.ರಾಜಕುಮಾರ್ ಹೆಸರಲ್ಲಿ ಹೋಟೆಲ್ ಕೂಡ ನಡೆಸುತ್ತಿದ್ದರು.

ಪುನೀತ್ ನಿಧನ ಸುದ್ದಿಯಿಂದ ಬೇಸರಗೊಂಡಿದ್ದ ರಾಜೇಶ್ ಅನ್ನ, ನೀರು ಸೇವಿಸದೇ ಮೂರು ದಿನಗಳಿಂದ ದು:ಖದಲ್ಲಿದ್ದರು. ಪುನೀತ್ ಅಂತಿಮ ದರ್ಶನಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದರು. ಆದರೆ ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ಬಳಿ ಸುಸ್ತಾಗಿ ಬಿದ್ದಿದ್ದರು. ವಾಪಸ್ ಮನೆಗೆ ಕರೆದುಕೊಂಡು ಹೋಗಿ ವೈದ್ಯರಿಂದ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ರಾಜೇಶ್ ಕೊನೆಯುಸಿರೆಳೆದಿದ್ದಾರೆ.

ನಿನ್ನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಪುನೀತ್ ಅಭಿಮಾನಿ ಸುರೇಶ್ ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದರು.

Home add -Advt

ನನ್ನ ಮಗನನ್ನೇ ಕಳೆದುಕೊಂಡಷ್ಟು ನೋವಾಗಿದೆ; ಕಣ್ಣೀರಿಟ್ಟ ಶಿವಣ್ಣ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button