ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮಂಡ್ಯ ಜಿಲ್ಲೆಗೆ ಆಗಮಿಸಿದ್ದು, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಮಂಡ್ಯದ ಪಾಂಡವಪುರದಲ್ಲಿ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಂಡ ಸೋನಿಯಾ ಗಾಂಧಿ ಅವರನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸ್ವಾಗತಿಸಿದರು.
ಕಾಂಗ್ರೆಸ್ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ, ಡಿಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ರಣದೀಪ್ ಸುರ್ಜೇವಾಲಾ ಸೇರಿದಂತೆ ಕಾಂಗ್ರೆಸ್ ನ ರಾಜ್ಯ ನಾಯಕರು ಪಾಲ್ಗೊಂಡಿದ್ದಾರೆ. ಅಲ್ಲದೇ ಲಕ್ಷಾಂತರ ಜನ ಕಾಂಗ್ರೆಸ್ ಕಾರ್ಯಕರ್ತರು ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಜೊತೆ ಹೆಜ್ಜೆ ಹಾಕಿದ್ದಾರೆ.
Karnataka | Congress interim president Sonia Gandhi joins 'Bharat Jodo Yatra' in Mandya district in the presence of party MP Rahul Gandhi along with several other leaders & party workers pic.twitter.com/hSOAv0EHxu
— ANI (@ANI) October 6, 2022
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ