
ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಒಂದೆಡೆ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದರೆ ಇನ್ನೊಂದೆಡೆ ಕಾಮುಕರ ದುಷ್ಕೃತ್ಯವೂ ಮೇರೆ ಮೀರುತ್ತಿದೆ. ಭಿಕ್ಷೆ ಬೇಡಿ ಬದುಕು ಸಾಗಿಸುತ್ತಿದ್ದ ಭಿಕ್ಷುಕಿಯ ಮೇಲೆ ಅತ್ಯಾಚಾರವೆಸಗಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯದ ಬಾಟ ಶೋರೂಂ ಎದುರಿನ ಫುಟ್‍ಪಾತ್‍ನಲ್ಲಿ ಮಲಗಿದ್ದ ಅಪರಿಚಿತ ಭಿಕ್ಷುಕಿಯ ಮೇಲೆ ಕಳೆದ ರಾತ್ರಿ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ನಂತರ ಅದೇ ಸ್ಥಳದಲ್ಲಿ ಆಕೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದು ಪರಾರಿಯಾಗಿದ್ದಾರೆ.
ಬೆಳಿಗ್ಗೆ ಜನರು ಓಡಾಡುತ್ತಿದ್ದಾಗ ಫುಟ್ ಪಾತ್ ಮೇಲೆ ಅಪರಿಚಿತೆಯೊಬ್ಬರ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿದ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತು ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.