ಪ್ರಗತಿವಾಹಿನಿ ಸುದ್ದಿ: ವ್ಯಕ್ತಿಯೊಬ್ಬ ನಡು ರಸ್ತೆಯಲ್ಲೇ ಏಕಾಏಕಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿತ್ರದುರ್ಗ ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ ನಡೆದಿದೆ.
ಚಿತ್ರದುರ್ಗ ನಗರ ಠಾಣೆಯ ಮುಂಭಾಗವೇ ಈ ಘಟನೆ ನಡೆದಿದೆ. 55 ವರ್ಷದ ಗೋಪಿನಾಥ್ ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿ. ಗೋಪಿನಾಥ್ ನಗರದ ವೃತ್ತಕ್ಕೆ ಬಂದು ಬೆಂಕಿ ಹಚ್ಚಿಕೊಂಡಿದ್ದಾರೆ. ಬೆಂಕಿಯ ಉರಿಗೆ ಕಿರುಚಾಡುತ್ತಿದ್ದ ವ್ಯಕ್ತಿ ಕಂಡು ಓಡಿಬಂದ ಪೊಲೀಸರು ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ.
ವ್ಯಕ್ತಿಯ ಮೇಲೆ ಚೀಲವನ್ನು ಹಾಕಿ ಬೆಂಕಿ ನಂದಿಸಿದ್ದಾರೆ. ಶೇ.50ರಷ್ಟು ದೇಹದ ಬಾಗ ಬೆಂಕಿಯಲ್ಲಿ ಸುಟ್ಟು ಹೋಗಿದೆ. ವ್ಯಕ್ತಿಯನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಲು ಕಾರಣವೇನು ಎಂಬುದು ತಿಳಿದುಬಂದಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ