Kannada NewsKarnataka NewsLatest
*ಬಿಯರ್ ಬಾಟಲ್ ಗಳಿದ್ದ ಲಾರಿ ಪಲ್ಟಿ: ಮುಗಿ ಬಿದ್ದ ಜನರು*

ಪ್ರಗತಿವಾಹಿನಿ ಸುದ್ದಿ: ಟೈರ್ ಬ್ಲಾಸ್ಟ್ ಆದ ಪರಿಣಾಮ 1,100 ಕೇಸ್ ಬಿಯರ್ ಹೊತ್ತೊಯ್ಯುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ನಡೆದಿದೆ.
ಹಾಸನದ ವುಡ್ ಪಿಕರ್ ಡಿಸ್ಟಿಲರೀಸ್ನಿಂದ ಕೊಪ್ಪಳಕ್ಕೆ ತೆರಳುತ್ತಿದ್ದ ಲಾರಿ ಅಪಘಾತಕ್ಕೀಡಾಗಿ, ಲಕ್ಷಾಂತರ ರೂಪಾಯಿ ಮೌಲ್ಯದ ಬಿಯರ್ ಬಾಟಲಿಗಳು ರಸ್ತೆ ಪಾಲಾಗಿವೆ.
ಅಪಘಾತದ ಬೆನ್ನಲ್ಲೇ ಮುಗಿ ಬಿದ್ದ ಸ್ಥಳೀಯರು ನೂರಾರು ಬಿಯರ್ ಬಾಟಲಿಗಳನ್ನು ಹೊತ್ತೊಯ್ದಿದ್ದು, ಬಳಿಕ ಬಂದ ಪೊಲೀಸರು ಮಾರ್ಗವನ್ನು ಬಂದ್ ಮಾಡಿದ್ದಾರೆ. ಅಳಿದುಳಿದ ಬಾಟಲಿಗಳನ್ನು ಸಂಗ್ರಹಿಸಲು ಟ್ರಾನ್ಸ್ಪೋರ್ಟ್ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
\




