
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಮಂಗಲಾ ಅಂಗಡಿ ಮಂಗಳವಾರ ನಾಮಪತ್ರ ಸಲ್ಲಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಕೆ.ಎಸ್.ಈಶ್ವರಪ್ಪ, ಉಮೇಶ ಕತ್ತಿ, ಜಗದೀಶ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲು, ಜಿಲ್ಲೆಯ ಶಾಸಕರು ಉಪಸ್ಥಿತರಿದ್ದರು.

ಮಂಗಲಾ ಅಂಗಡಿ ಕನಿಷ್ಠ 3 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಯಡಿಯೂರಪ್ಪ ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಸುರೇಶ ಅಂಗಡಿಯವರ ಕನಸುಗಳನ್ನು ನನಸು ಮಾಡಲು ಮತ ನೀಡುವಂತೆ ಮಂಗಲಾ ಅಂಗಡಿ ಕೋರಿದರು.
ಸಂಜೆ ಯಡಿಯೂರಪ್ಪ ವಿವಿಧ ಸಮಾಜಗಳ ಮುಖಂಡರ ಸಭೆ ನಡೆಸಿ ಬೆಂಬಲ ಕೋರಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ