ಪ್ರಗತಿವಾಹಿನಿ ಸುದ್ದಿ: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಉಗ್ರರ ಹೆಸರಲ್ಲಿ ಮಂಗಳೂರು ವಿಮಾನ ನಿಲ್ದಾಣ ಕಚೇರಿಗೆ ಇ-ಮೇಲ್ ಬಂದಿದ್ದು, ಕೆಲವೇ ಗಂಟೆಗಳಲ್ಲಿ ಬಾಂಬ್ ಸ್ಫೋಟಿಸಲಾಗುವುದು ಎಂದು ಎಚ್ಚರಿಸಲಾಗಿದೆ.
ವಿಮಾನ ನಿಲ್ದಾಣದ ಆವರಣ ಹಾಗೂ 3 ವಿಮಾನಗಳಲ್ಲಿ ಬಾಂಬ್ ಇಡಲಾಗಿದ್ದು, ಕೆಲವೇ ಗಂಟೆಗಳಲ್ಲಿ ದೊಡ್ದಮಟ್ಟದ ರಕ್ತಪಾತವಾಗಲಿದೆ. ಕೃತ್ಯದ ಹಿಂದೆ ‘ಟೆರರೈಸರ್ಸ್ 111’ ಕೈವಾಡವಿದೆ ಇದೆ ಎಂದು ಮೇಲ್ ಕಳುಹಿಸಲಾಗಿದೆ.
ಏಪ್ರಿಲ್ 29ರಂದು ಬಾಂಬ್ ಬೆದರಿಕೆ ಇ ಮೇಲ್ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ