Latest

ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಂಗಳೂರಿನಲ್ಲಿ ಸಂಭವಿಸಿದ ಪ್ರೆಷರ್ ಕುಕ್ಕರ್ ಸ್ಪೋಟದ ತನಿಖೆ ಚುರುಕುಗೊಂಡಿದೆ. ಪ್ರಮುಖ ಆರೋಪಿಯ ವೈಯಕ್ತಿಕ ಮಾಹಿತಿಗಳನ್ನು ಪೊಲೀಸರು ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಸಂಪರ್ಕ ಯಾವ ಊರುಗಳಲ್ಲಿದೆ ಎಂಬುದರ ಮಾಹಿತಿಯೂ ಲಭಿಸಿದೆ. ಆತನ ನಿಜವಾದ ಹೆಸರು ಹಾಗೂ ಗುರುತು ಪತ್ತೆಯಾದ ನಂತರ , ಆತ ಬೇರೆಯಾವ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯಲಿದೆ. ಆ ಜಾಡನ್ನು ಹಿಡಿದು ತನಿಖೆ ನಡೆಯುತ್ತಿದೆ ಎಂದರು.

Related Articles

ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲು ಪೊಲೀಸರಿಗೆ ಸೂಚನೆ :

ಆರೋಪಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಕುಟುಂಬ ವರ್ಗದವರು ಆತನ ಗುರುತಿಸಿರುವುದು ಪ್ರಮುಖ ಬೆಳೆವಣಿಗೆ. ಇಲ್ಲಿಯವರೆಗಿನ ಎಲ್ಲ ಮಾಹಿತಿಗಳನ್ನು ರಾಷ್ಟ್ರೀಯ ತನಿಖಾ ದಳ ಹಾಗೂ ಐಬಿ ಗೆ ನೀಡಲಾಗಿದೆ. ಇದೇ ರೀತಿಯ ಕೃತ್ಯಗಳು ಬೇರೆ ಕಡೆಯೂ ಮಾಡಿದ್ದರೆ ಎಂಬುದು, ಈ ಘಟನೆಯ ಹಿಂದಿನ ಸಂಘಟನೆ ಬಗ್ಗೆ ಮಾಹಿತಿಗಳು ತಿಳಿಯಬೇಕಿದೆ. ಈ ನಿಟ್ಟಿನಲ್ಲಿಯೂ ತನಿಖೆ ಮುಂದುವರೆದಿದ್ದು, ವಿಷಯಗಳು ಲಭ್ಯವಾದ ನಂತರ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಎಲ್ಲ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪೊಲೀಸರು, ಭಯೋತ್ಪಾದಕ ನಿಗ್ರಹ ದಳ, ಆಂತರಿಕ ಸುರಕ್ಷತಾ ವಿಭಾಗಗಳು ಸಂಯೋಜಿಸಿ ಕಾರ್ಯನಿರ್ವಹಿಸಬೇಕು. ತನಿಖೆಯನ್ನು ಚುರುಕುಗೊಳಿಸಿ , ಹಿಂದಿರುವ ಘಾತುಕ ಶಕ್ತಿಗಳನ್ನು ಬಹಿರಂಗಗೊಳಿಸಬೇಕು ಎಂದರು.

ಸಿದ್ದರಾಮಯ್ಯನವರು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ವಿಫಲವಾಗಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ,ಕಾಂಗ್ರೆಸ್ ಕಾಲದಲ್ಲಿಯೂ ಇಂತಹ ಹಲವಾರು ಘಟನೆಗಳು ಸಂಭವಿಸಿವೆ. ಇದು ರಾಜಕೀಯ ಪ್ರೇರಿತ ಹೇಳಿಕೆ. ಇಂತಹ ಹೇಳಿಕೆಗಳಿಗೆ ಮಹತ್ವ ನೀಡುವುದಿಲ್ಲ ಎಂದರು.

ಫೆಬ್ರವರಿ ಅಂತ್ಯದೊಳಗೆ 7 ಲಕ್ಷ ಮನೆಗಳನ್ನು ಪೂರ್ಣಗೊಳಿಸಿ: ಸಿಎಂ ಬೊಮ್ಮಾಯಿ

https://pragati.taskdun.com/basavaraj-bommaihousing-departmentprogress-review-meeting/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button