
ಪ್ರಗತಿವಾಹಿನಿ ಸುದ್ದಿ: ರಸ್ತೆ ದಾಟುವಾಗ ಎಷ್ಟೇ ಎಚ್ಚರಿಕೆ ವಹಿಸಿದರೂ ಕಡಿಮೆಯೇ. ರಸ್ತೆ ದಾಟುತ್ತಿದ್ದ ಮೂವರು ಪಾದಚಾರಿಗಳ ಮೇಲೆ ವೇಗವಾಗಿ ಬಂದ ಕಾರು ಹರಿದು ಹೋಗಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಕುಳಾಯಿ ಬಳಿ ನಡೆದಿದೆ.
ರಾಯಚೂರು ಜಿಲ್ಲೆಯ ಸಿಂಧನೂರಿನ ದೀಪುಗೌಡ (50) ಮೃತ ವ್ತಕ್ತಿ. ಅಪಘಾತದಲ್ಲಿ ಕೊಪ್ಪಳ ಜಿಲ್ಲೆಯ ಕಾರಟಗಿ ಮೂಲದ ಪ್ರದೀಪ್ ಕೊಲ್ಕಾರ್ ಮಂಗಳೂರಿನ ಕೋಡಿಕೆರೆ ನಿವಾಸಿ ನಾಗರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.